ಉಡುಪಿ: ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನ 42,687 ಪ್ರಕರಣ ಇತ್ಯರ್ಥ

ಉಡುಪಿ:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಶನಿವಾರ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 42,687 ಪ್ರಕರಣಗಳನ್ನು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -22, ಚೆಕ್ಕು ಅಮಾನ್ಯ ಪ್ರಕರಣ-244, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-7, ಎಂ.ವಿ.ಸಿ ಪ್ರಕರಣ-150, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1,ಎಂ.ಎಂಆರ್.ಡಿ ಆಕ್ಟ್ ಪ್ರಕರಣ-8,ವೈವಾಹಿಕ ಪ್ರಕರಣ-4, ಸಿವಿಲ್ ಪ್ರಕರಣ-187,ಇತರೇ ಕ್ರಿಮಿನಲ್ ಪ್ರಕರಣ-2587ಹಾಗೂ ವ್ಯಾಜ್ಯ ಪೂರ್ವ ದಾವೆ-39477)ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.20,47,37,959/ಪರಿಹಾರದ ಮೊತ್ತವನ್ನುಘೋಷಿಸಲಾಯಿತು.
 
ನ್ಯಾಯಾಂಗ ಇಲಾಖೆ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ತಾಲೂಕು ಕಾನೂನು ಸೇವೆಗಳ ಸಮಿತಿ,ವಕೀಲರ ಸಂಘ, ಉಡುಪಿ,ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ,ಪೊಲೀಸ್ ಇಲಾಖೆ,ಕಂದಾಯ ಇಲಾಖೆ,ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು,ಬ್ಯಾಂಕ್,ಕಕ್ಷಿಗಾರರು  ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಯಿತು.

Leave a Reply

Your email address will not be published. Required fields are marked *

error: Content is protected !!