ಬೈಂದೂರು: ಮಾದಕ ವಸ್ತು ಸೇವನೆ- ಯುವಕ ವಶಕ್ಕೆ

ಬೈಂದೂರು ಫೆ.12(ಉಡುಪಿ ಟೈಮ್ಸ್ ವರದಿ):  ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಬೈಂದೂರಿನ ಯಡ್ತರೆ ಗ್ರಾಮದ ಬಸ್ ನಿಲ್ದಾಣದ ಬಳಿ ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ಬೈಂದೂರು ಪೊಲೀಸರು ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದ ಬೈಂದೂರು ಸರಕಾರಿ ಬಸ್ಸು ನಿಲ್ದಾಣದ ಬಳಿ ರೌಂಡ್ಸ ಕರ್ತವ್ಯದಲ್ಲಿರುವಾಗ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡಿದ್ದ  ವಿಶಾಲ್(22) ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು  ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢ ಪಟ್ಟಿದ್ದು, ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!