ಕುಂದಾಪುರ:ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ- ವ್ಯಕ್ತಿಯ ಸೆರೆ

ಕುಂದಾಪುರ ಫೆ.11(ಉಡುಪಿ ಟೈಮ್ಸ್ ವರದಿ):  ತಾಲೂಕಿನ ಬೀಜಾಡಿ ಗ್ರಾಮದ ಹಳೆ ಅಳಿವೆ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಕುಂದಾಪುರ ಪೊಲೀಸರು ನಿನ್ನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಹಳೆ ಅಳಿವೆ ಜಂಕ್ಷನ್ ಬಳಿ ತಲುಪಿ ನೋಡಿದಾಗ ಸುಮಂತ್ ಮೋಗವೀರ ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಕುಳಿತುಕೊಂಡು ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!