ಸುನಿಲ್ ವಿರುದ್ಧ ಅವರ ಪಕ್ಷದವರೇ ನನ್ನನ್ನು ಚುನಾವಣಾ ಕಣಕ್ಕೆ ಇಳಿಸಿದ್ದಾರೆ- ಮುತಾಲಿಕ್

ಕಡತ ಚಿತ್ರ

ಮಂಗಳೂರು ಫೆ.13: ಶಾಸಕ ಸುನೀಲ್ ಕುಮಾರ್ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ. 

ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದೆ. ಇದೇ ರೀತಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ ಎಂದರು.ಹಾಗೂ ನಕಲಿ ಹಿಂದುತ್ವ ಮತ್ತು ಭ್ರಷ್ಟಚಾರದ ವಿರುದ್ದ ನನ್ನ ಸ್ಪರ್ಧೆ ಎಂದ ಅವರು ಕಾರ್ಕಳದಲ್ಲಿ ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಜೆಪಿಯಲ್ಲಿ ಚುರುಕಾಗುತ್ತಿರುವ ಚುನಾವಣೆ ತಾಲೀಮು ಪ್ರೇಮಿಗಳ ದಿನಾಚರಣೆಗೆ ಈ ಬಾರಿಯೂ ವಿರೋಧವಿದೆ. ಪೊಲೀಸರ ಜತೆ ಸೇರಿ ಕಾನೂನು ಬದ್ದವಾಗಿ ತಡೆಯುತ್ತೇವೆ. ಪ್ರೇಮಿಗಳ ದಿನ ಆಚರಣೆ ನೆಪದಲ್ಲಿ ಅನೈತಿಕತೆ, ಡ್ರಗ್ಸ್ ಮಾಫಿಯಾ ಸೆಕ್ಸ್ ಮಾಫಿಯಾಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಇದೇ ವೇಳೆ ಹೇಳಿದರು.

Leave a Reply

Your email address will not be published. Required fields are marked *

error: Content is protected !!