ಅನುದಾನದ ಹಂಚಿಕೆಯಲ್ಲಿ ಭ್ರಷ್ಟಾಚಾರ- ಬಿಜೆಪಿ ಶಾಸಕ, ಇಬ್ಬರು ಮಕ್ಕಳು ದೋಷಿ

ಬೆಂಗಳೂರು ಫೆ.14 : ಅನುದಾನದ ಹಂಚಿಕೆಯಲ್ಲಿ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿ ಹಾವೇರಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೇಕಾರ್ ಮತ್ತು ಅವರ ಇಬ್ಬರು ಪುತ್ರರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನೆಹರೂ ಓಲೇಕಾರ್, ಅವರ ಪುತ್ರರಾದ ಮಂಜುನಾಥ ಸಿ. ಓಲೇಕಾರ್ ಮತ್ತು ದೇವರಾಜ ಎನ್. ಓಲೇಕಾರ್ ಸೇರಿದಂತೆ ಒಟ್ಟು ಒಂಬತ್ತು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ಮೂರು ವರ್ಷಗಳಿಗಿಂತ ಕಡಿಮೆ ಇದ್ದು ಎರಡು ವರ್ಷಗಳಿರುವ ಕಾರಣ ಇದೇ ನ್ಯಾಯಾಲಯ ನೆಹರೂ ಓಲೇಕಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹಾವೇರಿಯ ಶಶಿಧರ ಮಹಾದೇವಪ್ಪ ಹಳ್ಳಿಕೇರಿ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13 (2) ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 420, 197,198 ಮತ್ತು 409ರ ಅನ್ವಯ 

ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

ನಗರಸಭೆಗೆ ಮಂಜೂರಾದ ಒಂದು ಕೋಟಿ ರೂಪಾಯಿ ಅನುದಾನದ ಹಂಚಿಕೆಯಲ್ಲಿ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿ ಶಾಸಕ ನೆಹರೂ ಓಲೇಕಾರ್ ಮತ್ತು ಅವರ ಇಬ್ಬರು ಪುತ್ರರನ್ನು ದೋಷಿ ಎಂದು ತೀರ್ಮಾನಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!