ಕರ್ನಾಟಕ ರಾಷ್ಟ್ರ ಸಮಿತಿ: ಸೆ.14ರಿಂದ ಚಲಿಸು ಕರ್ನಾಟಕ ಸೈಕಲ್ ಯಾತ್ರೆ
ಉಡುಪಿ: (ಉಡುಪಿ ಟೈಮ್ಸ್ ವರದಿ)ಕೋವಿಡ್ ಸಂಕಷ್ಟದಿಂದ ಬಳಲುತ್ತಿರುವ ರೋಗಿಗಳ ಹೆಸರಿನಲ್ಲಿ ಸರ್ಕಾರ ಹಣ ಲೂಟಿ ಮಾಡುತ್ತಿದೆ. ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ದೂರಿದರು.
ಕೊರೋನ ವೈರಸ್ ಸೋಂಕು ನಮ್ಮಲ್ಲಿ ಅವ್ಯವಸ್ಥೆ ಮತ್ತು ಅಕ್ರಮಗಳನ್ನು ಹೊರಹಾಕಿದೆ. ಒಂದೆಡೆ ನಿರಂತರವಾಗಿ ಅಕ್ರಮ ಮರಳು, ಕಲ್ಲು, ಅದಿರು ಗಣಿಗಾರಿಕೆ ನಡೆಸುತ್ತಿದ್ದರೆ, ಜನಸಾಮಾನ್ಯರ ಮರಳು ಸಿಗದೆ ಪರದಾಡುತ್ತಿದ್ದಾರೆ. ರೈತರು ಬರ-ನೆರೆಯಿಂದ ಸಂಕಷ್ಟ ಕ್ಕೊಳಗಾಗಿದ್ದಾರೆ. ಅದರ ಲಾಭವನ್ನು ಅಧಿಕಾರಿಗಳು ಮತ್ತು ಪಟ್ಟಭದ್ರರು ಪಡೆಯುತ್ತಿದ್ದಾರೆ. ಕಳೆದ ವರ್ಷದ ನೆರೆ ಪರಿಹಾರ ಬಹುತೇಕರಿಗೆ ಇಲ್ಲಿಯವರೆಗೂ ಸಿಕ್ಕಿಲ್ಲ ಎಂದು ಕೆಆರ್ ಎಸ್ ನ ರಾಜ್ಯ ಉಪಾಧ್ಯಕ್ಷರಾದ ಅಮೃತ್ ಶೆಣೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಉಡುಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರು ತಮ್ಮ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡಿ ಬೇಕಾದ ಪರಿಸ್ಥಿತಿ ಇದೆ. ಕಾನೂನು ಮತ್ತು ಅನ್ಯಾಯಕ್ಕೊಳಗಾದ ಜನರನ್ನು ರಕ್ಷಿಸಬೇಕಾದ ಪೊಲೀಸರು ಜನರು ಶೋಷಣೆಗೆ ನಿಂತಿರುವಂತಿದೆ. ಸರ್ಕಾರದ ಮಟ್ಟದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ,
ಕೋವಿಡ್-19 ಸಂಕಷ್ಟದ ಸಮಯದಲ್ಲೂ ಕೋವಿಡ್ ಹೆಸರಿನಲ್ಲಿ ಹಣ ಲೂಟಿ ಮಾಡಲಾಗುತ್ತಿದೆ, ಕೇವಲ ಅಧಿಕಾರಕ್ಕಾಗಿ ಮತ್ತು ಅದರಿಂದ ಹಣ ಮಾಡುವುದರ ಬಗ್ಗೆಯಷ್ಟೇ ರಾಷ್ಟ್ರೀಯ ಪಕ್ಷಗಳ ಗಮನವಿದೆ, ಪ್ರತಿಯೊಂದರ ಮೇಲೆ ವಿಪರೀತ ತೆರಿಗೆ ಕಟ್ಟಬೇಕಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಕುಸಿದಿದ್ದರೂ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಷ್ಟೊಂದು ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸುತ್ತಿದ್ದರೂ, ಬೊಕ್ಕಸ ಮಾತ್ರ ಖಾಲಿ, ಕೋವಿಡ್‌ನಿಂದ ಜನರು ಮತ್ತಷ್ಟು ಸಂಕಷ್ಟಕ್ಕೆ ಈಡಾಗಿದ್ದಾರೆ. ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ, ಉದ್ಯಮಗಳು, ವ್ಯಾಪಾರ-ವಹಿವಾಟು ಕುಂಠಿತವಾಗಿದೆ, ಈ ಸಂದರ್ಭದಲ್ಲಿ ಜನರಿಗೆ ಸ್ಪಂದಿಸಬೇಕಾದ ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ದಾರೆ ಹಾಗಾಗಿ ದೇಶದ ಉಜ್ವಲ ಭವಿಷ್ಯಕ್ಕಾಗಿ ತಮ್ಮ ಈ ಸೈಕಲ್ ಜಾತಕ್ಕೆ ಜನ ಬೆಂಬಲಿಸಬೇಕಾಗಿ ಕೇಳಿಕೊಂಡರು.
ಕರ್ನಾಟಕ ರಾಷ್ಟ್ರ ಸಮಿತಿ ಸ್ಥಾಪನೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಲಿಸು ಕರ್ನಾಟಕ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ 2700 ಕಿಮೀ ಸೈಕಲ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸರ್ಕಾ ರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಜನರಲ್ಲಿ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಿ ಅವಶ್ಯಕತೆಯ ಬಗ್ಗೆ ತಿಳಿಸಲು ಸೈಕಲ್ ಯಾತ್ರೆ ಆಯೋಜಿಸಲಾಗಿದೆ ಎಂದು. ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಮೂರು ಹಂತಗಳಲ್ಲಿ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ನಲ್ಲಿ ಸೈಕಲ್ ಯಾತ್ರೆ ನಡೆಯಲಿದೆ. ಮೊದಲ ಹಂತದ ಯಾತ್ರೆ ಸೆ.14ರಂದು ಕೋಲಾರದಲ್ಲಿ ಆರಂಭವಾಗಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ ಜಿಲ್ಲೆಯಲ್ಲಿ ಸಾಗಿ ಸೆ.18 ಮದ್ದೂರು ಆಗಮಿಸಲಿದೆ.
ಸೆ. 19ರಂದು ಮಂಡ್ಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಲಾಗುವುದು. ನಂತರ ಚಾಮರಾಜನಗರ, ಮೈಸೂರು, ಕೊಡಗು, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಗಿ ತುಮಕೂರಿನ ಶಿರಾದಲ್ಲಿ ಸಮಾರೋಪ ಗೊಳ್ಳಲಿದೆ ಎಂದು. ಅ.5ರಂದು ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ , ವಿಜಯಪುರ, ಬಾಗಲಕೋಟೆ, 23ರಿಂದ ಬೆಳಗಾವಿ, ನ. ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದರು.ಮುಂಬರುವ ಗ್ರಾಪಂ ಚುನಾ ವಣೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ನನ್ನನ್ನು ಸಂಪರ್ಕಿಸಬಹುದು. (ಮೊ. 9449329929 7975625575), ಸ್ವಚ್ಛ ರಾಜಕಾರಣಕ್ಕೆ ಸದಾ ನೆರವು ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ಶಹೀದ್ ಅಲಿ ಪ್ರಸಾದ್ ಕರ್ಕಡ,ಕಿರಣ್ ಕುಮಾರ್,ಕಿರಣ್ ವಿನುತ,ಇಕ್ಬಾಲ್, ವಿನೋದ್ ಬಂಗೇರ, ಪ್ರೀತೇಶ್, ರಾಮ್ ದಾಸ್. ಪೈ ಇತರರು ಉಪಸ್ಥಿತರಿದ್ದರು.