ಕೋಟ:ಮಗುವಿಗೆ ಹಾಲು ಕುಡಿಸುತ್ತಿರುವಾಗ ಕುಸಿದು ಬಾಣಂತಿ ಮೃತ್ಯು

ಕೋಟ, ಫೆ.19: ಮಗುವಿಗೆ ಹಾಲು ಕುಡಿಸುತ್ತಿರುವಾಗ ವೇಳೆ ಬಾಣಂತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಗುಣವತಿ(39) ಎಂದು ಗುರುತಿಸಲಾಗಿದೆ. ಇವರು ಡಿ.23ರಂದು ಉಡುಪಿಯ ತಾಯಿ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿ ಗಂಡು ಮಗುವಿನ ಜನ್ಮ ನೀಡಿದ್ದರು. 21 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಬಂದಿದ್ದರು. ಸುಮಾರು ಒಂದು ವಾರದ ಹಿಂದೆ ಗುಣವತಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತೆನ್ನಲಾಗಿದೆ.

ಫೆ.18ರಂದು ಬೆಳಗ್ಗೆ ಮಗುವಿಗೆ ಹಾಲು ಎದೆಹಾಲು ಉಣಿಸುತ್ತಿದ್ದ ವೇಳೆ ನಿತ್ರಾಣಗೊಂಡ ಗುಣವತಿ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಇವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿಮಧ್ಯೆ ಕೊನೆಯುಸಿರೆಳೆದರೆನ್ನಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!