ಚಿಕ್ಕಮಗಳೂರು: ಸಿ.ಟಿ ರವಿ ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್…!

ಚಿಕ್ಕಮಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ತಿಂಗಳು ಬಾಕಿ ಇರುವಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಸ್ವಕ್ಷೇತ್ರದ ಲಿಂಗಾಯುತ ಮುಖಂಡ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಅತ್ಯಾಪ್ತ ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಹೆಚ್. ತಿಮ್ಮಯ್ಯ ಬಿಜೆಪಿಗೆ ಗುಡ್ ಬೈ ಹೇಳಿ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಡಿ.ತಮ್ಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇನ್ನು ಹೆಚ್ ಡಿ ತಮ್ಮಯ್ಯ ಚಿಕ್ಕಮಗಳೂರು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಮುಖಂಡರಾಗಿದ್ದಾರೆ. ಇದರಿಂದ ಬಿಜೆಪಿಗೆ ವರದಾನವಾಗಿತ್ತು. ಆದರೆ ಈಗ ಕಾಂಗ್ರೆಸ್? ಸೇರ್ಪಡೆಯಿಂದ ಬಿಜೆಪಿಗೆ ಭಾರೀ ಹೊಡೆತ ಬೀಳುವ ಸಾಧ್ಯತೆ ಇದೆ. ಚಿಕ್ಕಮಗಳೂರಲ್ಲಿ 15 ಸಾವಿರ ಒಕ್ಕಲಿಗ ಮತವಿದ್ದು, 40 ಸಾವಿರಕ್ಕೂ ಹೆಚ್ಚು ಲಿಂಗಾಯತ ಸಮುದಾಯ ಮತಗಳಿವೆ. ಆದರೆ ಈಗ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಪಾಲಿನ ಲಿಂಗಾಯತ ಮತ ಒಡೆಯುವ ಸಾಧ್ಯತೆ ಇದೆ.

ತಮ್ಮಣ್ಣ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾಡಿ ಶಕ್ತಿ ಪ್ರದರ್ಶ ಮಾಡಲು ಆಲೋಚಿಸಿದ್ದೆವು. ಸಂಘಟನೆಗೆ ತೊಂದರೆ ಆಗಬಾರದು ಎಂದು ಇಲ್ಲಿ ಸೇರ್ಪಡೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಮತ್ತೊಮ್ಮೆ ಈ ಕಾರ್ಯ ಮಾಡಲಾಗುವುದು ಎಂದು ಡಿ.ಕೆ‌ ಶಿವಕುಮಾರ್ ಹೇಳಿದ್ದಾರೆ. ನಾಳೆಯೂ ಪಕ್ಷ ಸೇರ್ಪಡೆ ಕಾರ್ಯಕ್ರಮವಿದ್ದು, ನಾನು ಉಪಸ್ಥಿತನಿರಲು ಆಗುವುದಿಲ್ಲ. ಎಐಸಿಸಿ ನಾಯಕರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಕೆಲವು ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಇನ್ನು ಹಾಲಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕೆಲವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲು ಕಷ್ಟವಾಗುತ್ತದೆ. ಮತ್ತೆ ಕೆಲವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಈಗ ಆ ನಾಯಕರ ಹೆಸರು ಪ್ರಸ್ತಾಪ ಮಾಡುವುದಿಲ್ಲ. ನಾನು ಗಾಳಿಯಲ್ಲಿ ಗುಂಡು ಹೊಡೆದು ಅವರ ರಾಜಕೀಯ ಜೀವನಕ್ಕೆ ಅಡ್ಡಿಪಡಿಸುವುದಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!