ಶಂಕರಪುರ: ಇನ್ನರ್ ವೀಲ್ ಕ್ಲಬ್’ಗೆ ಜಿಲ್ಲಾ ಚೇರ್ಮೆನ್ ಕವಿತಾ ನಿಯತ್ ಭೇಟಿ

ಕಾಪು: ಇನ್ನರ್ ವೀಲ್ ಜಿಲ್ಲಾ ಚೇರ್ಮೆನ್ ಕವಿತಾ ನಿಯತ್ ಅವರು ಶಂಕರಪುರ ಇನ್ನರ್ ವೀಲ್ ಕ್ಲಬ್ ಗೆ ಶುಕ್ರವಾರ ಅಧಿಕೃತ ಭೇಟಿ ನೀಡಿದರು.

ಅಧಿಕೃತ ಭೇಟಿಯ ಸಭಾ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉದಯೋನ್ಮುಖ ಸಂಗೀತಗಾರ ಆಯುಷ್ ರೇಗನ್ ಮಿನೇಜಸ್ ಹಾಗೂ ಶಿರ್ವದಲ್ಲಿ ವಿಭಿನ್ನ ಶಕ್ತಿಯ ಮಕ್ಕಳಿಗೆ ತರಬೇತಿ ಹಾಗೂ ತರಗತಿಯನ್ನು ನೀಡುತ್ತಿರುವ ವಿಶಿಷ್ಟ ಸಂಸ್ಥೆಯ ಸ್ಥಾಪಕಿ ಫ್ಲೋರಿನ್ ರಿಮಾ ಮಿನಜಸ್ ಅವರನ್ನು ಸನ್ಮಾನಿಸಲಾಯಿತು.

ಹಾಗೂ ಸುಭಾಷ್ ನಗರ ಸರಕಾರಿ ಗುಡ್ಡೆ ಹಾಗೂ ಶಂಕರಪುರ ಪರಿಸರದಲ್ಲಿ ಅಡ್ಡರಸ್ತೆಯ ಗುರುತಿನ 9 ನಾಮಫಲಕಗಳನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಂಕರಪುರದ ಮುಖ್ಯ ಬೆಳೆಯಾದ ಮಲ್ಲಿಗೆ ಕೃಷಿ ಹಾಗೂ ಹೂವಿನ ಬಗ್ಗೆ ಮತ್ತು ಶಂಕರಪುರ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಅತಿಥಿಯಾಗಿ ಆಗಮಿಸಿದ್ದ ಸಿ.ಜಿ .ಆರ್.ದೀಪಾ ಭಂಡಾರಿ ಸಂಸ್ಥೆಯ ಗ್ರಹ ಪತ್ರಿಕೆ “ಹೊಂಗಿರಣ” ಅನ್ನು ಬಿಡುಗಡೆಗೊಳಿಸಿ ಸಂಸ್ಥೆಯ ಕಾರ್ಯ ವೈಖರಿಯ ಬಗ್ಗೆ ಕೊಂಡಾಡಿದರು. ರೋಟರಿ ಸದಸ್ಯರು ಜೆಸಿಐ ಸದಸ್ಯರು ನೆರಯ ಇನ್ನರ್ ವೀಲ್ ಕ್ಲಬ್ ಗಳಿಂದ ಆಗಮಿಸಿದ ಸದಸ್ಯರು ಉಪಸ್ಥಿತರಿದ್ದರು.

ಅಧ್ಯಕ್ಷರಾದ ಶಾಲಿನಿ ಚಂದ್ರ ಸ್ವಾಗತಿಸಿ, ಎಲಿಜಾ ಮಾರ್ಟಿಸ್ ಪ್ರಾರ್ಥಿಸಿದರು. ಲೀನಾ ಮೆಂಡೋನ್ಸ ಕಾರ್ಯಕ್ರಮ ನಿರೂಪಿಸಿ,ಆಲಿಸ್’ ರೋಡ್ರಿಗಸ್ ಧನ್ಯವಾದಗೈದರು.

Leave a Reply

Your email address will not be published. Required fields are marked *

error: Content is protected !!