ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಮಾರಂಭ- ರಿಷಬ್ ಶೆಟ್ಟಿ ಭರವಸೆಯ ನಟ ಪ್ರಶಸ್ತಿ

ಬೆಂಗಳೂರು ಫೆ.21 : ದಾದಾಸಾಹೇಬ್ ಫಾಲ್ಕೆ ಇಂಟರ್‌ ನ್ಯಾಶನಲ್ ಫಿಲ್ಡ್ ಫೆಸ್ಟಿವಲ್ ಅವಾರ್ಡ್ಸ್ 2023ರಲ್ಲಿ ಕಾಂತಾರ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು 2023ನೇ ಸಾಲಿನ ಭರವಸೆಯ ನಟ ಪ್ರಶಸ್ತಿ’ ಗೌರವವನ್ನು ಪಡೆದುಕೊಂಡಿದ್ದಾರೆ.

ಅದ್ದೂರಿ ಸಮಾರಂಭದಲ್ಲಿ ರಿಷಬ್ ಶೆಟ್ಟಿ ಅವರು ತಮಗೆ ಸಿಕ್ಕ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಮತ್ತು ನಿರ್ದೇಶಕ ಎಸ್‌ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಪ್ರತಿಕ್ರಿಯೆ ನೀಡಿರುವ ಅವರು, “ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನನಗೆ ನೀಡಿದ್ದಕ್ಕಾಗಿ ಎಷ್ಟು ಧನ್ಯವಾದ ವ್ಯಕ್ತಪಡಿಸಿದರೂ ಸಾಲದು. ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಮ್ಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರಶಸ್ತಿ ಸಿಕ್ಕಿರುವುದು ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!