ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ

ಮಂಗಳೂರು, ಫೆ.21: ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1 ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾ. ಪಂಚಾಯತ್‍ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ 2023ರ ಫೆ.24ರ ಬೆಳಿಗ್ಗೆ 6 ಗಂಟೆಯಿಂದ ಫೆ.25ರ ಸಂಜೆ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!