ಕರಾವಳಿಗೆ ಸೆ.11 ರಿಂದ 12 ವರೆಗೆ “ರೆಡ್ ಅಲರ್ಟ್”: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: (ಉಡುಪಿ ಟೈಮ್ಸ್ ವರದಿ)ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿ ಜಿಲ್ಲೆಗೆ ಸೆ.11 ರಿಂದ 12 ವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುತ್ತದೆ.

ಕರಾವಳಿ ಜಿಲ್ಲೆಯಲ್ಲಿ ದಿನಾಂಕ ಸೆ.10 ರಂದು ಒರೆಂಜ್ ಅಲರ್ಟ್ ಹಾಗೂ ಸೆ.11 ರಿಂದ 12 ವರೆಗೆ ರೆಡ್ ಅಲರ್ಟ್ ಘೋಷಿಸಿಲಾಗಿದೆ. (204.5 mm) ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದ್ದು, ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ /ಕಟ್ಟಡ ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪುವುದು.

ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ
ಸ್ನಾನದಲ್ಲಿರುವಂತೆ ತಿಳಿಸಲಾಗಿದೆ. ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಕರಣಿಕರು ತಮ್ಮ ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ವಿಪತ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವುದು ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವುದು. ಈ ಪ್ರಕಟಣೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೊರಡಿಸಲಾಗಿದೆ.

1 thought on “ಕರಾವಳಿಗೆ ಸೆ.11 ರಿಂದ 12 ವರೆಗೆ “ರೆಡ್ ಅಲರ್ಟ್”: ಹವಾಮಾನ ಇಲಾಖೆ ಎಚ್ಚರಿಕೆ

  1. During the difficult time of sevier spreading of Covid 19, and also heavy rain people facing problem. KRIDL newly made concrete road, blocking the rain water natural flowing by anti technically putting underneath cement pipes and dumped Jalli stones in the roadside, near Janatha colony, Kalmargi -guddettu road, Shiriyara village, Brahmavara taluk, Udupi dist. Immediate and strict action should be taken against the contractor.

Leave a Reply

Your email address will not be published. Required fields are marked *

error: Content is protected !!