ನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿ

ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ  ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು.

 ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ,  ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ, ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು,, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದರು.

ಶೇ. 16 ರಷ್ಟು ಬಜೆಟ್ ಗಾತ್ರ ಹೆಚ್ಚಳ ರಾಜ್ಯ ಆರ್ಥಿಕ ಸೂಚಕ:  2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ  ಜನವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳವನ್ನು ಸಾಧಿಸುವ ಸಾಧ್ಯತೆ ಇದೆ.  ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮ ಬದ್ಧತೆಯನ್ನು ಸಾಧಿಸಿದೆ.  ಕೋವಿಡ್  ನಂತರದ ವರ್ಷದಲ್ಲಿ  ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗಿದೆ.  ಈ ಬಾರಿ 3,09,182 ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದರು.

402 ಕೋಟಿ ರೂ. ಆದಾಯ ಹೆಚ್ಚಳ:  ಕೇಂದ್ರದ ತೆರಿಗೆಯಲ್ಲಿ ರಾಜ್ಯದ  ತೆರಿಗೆ ಪಾಲನ್ನು 37, 252  ಕೋಟಿ ರೂ. ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ(ಕಳೆದ ಸಾಲಿಗಿಂತ ಶೇ. 25 ರಷ್ಟು  ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ರಾಜ್ಯ  402 ಕೋಟಿ ಆದಾಯ ಹೆಚ್ಚಳವನ್ನು(revenue surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ.  ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆ(revenue deficit)ಯನ್ನು ತೋರಿಸುತ್ತಿದೆ ಎಂದರು.

Leave a Reply

Your email address will not be published. Required fields are marked *

error: Content is protected !!