ಪುಲ್ವಾಮಾದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ- ಕಾಶ್ಮೀರಿ ಪಂಡಿತನ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭಯೋತ್ಪಾದಕರು ಕಾಶ್ಮೀರಿ ಪಂಡಿತ ಸಮುದಾಯದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆಂದು ತಿಳಿದುಬಂದಿದೆ.
ಮೃತರನ್ನು ಸಂಜಯ್ ಶರ್ಮಾ (40) ಎಂದು ಗುರುತಿಸಲಾಗಿದೆ. ರವಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಾರುಕಟ್ಟೆಗೆಂದು ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ತಿಳಿಸಿದ.
ಘಟನಾ ಸ್ಥಳವನ್ನು ಪೊಲೀಸರು ಹಾಗೂ ಗಡಿಭದ್ರತಾ ಪಡೆಗಳು ಸುತ್ತುವರೆದಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.