ಸ್ಟ್ರೀನಿಂಗ್ ಕಮಿಟಿಯಲ್ಲಿ 170 ಕ್ಷೇತ್ರಗಳ ಟಿಕೆಟ್ ಅಂತಿಮ- ಡಿ.ಕೆ ಶಿವಕುಮಾರ್

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಇನ್ನೂ ಕೆಲವೇ ದಿ‌ನ ಇರುವುದರಿಂದ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಬುಧವಾರ ನಡೆದ ಸ್ಟ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.

ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಈಗಾಗಲೇ 170 ಕ್ಷೇತ್ರಗಳ ಟಿಕೆಟ್ ಅಂತಿಮ ಗೊಂಡಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಇಂದು ಚರ್ಚೆ ನಡೆಯಬೇಕಿದೆ. ಬಳಿಕ ದೆಹಲಿಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ರವಾನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ಎಲ್ಲ ಕ್ಷೇತ್ರಗಳ ಟಿಕೆಟ್ ವಿಚಾರದಲ್ಲಿ ಒಮ್ಮತದ ತೀರ್ಮಾನ ಆಗುತ್ತಿದೆ. ಪಕ್ಷವನ್ನು ಗೆಲ್ಲಿಸಿ, ಬಿಜೆಪಿಯನ್ನು ಸೋಲಿಸಲೇ ಬೇಕು ಎಂದು ಕಾರ್ಯಕರ್ತರು ಪಣ ತೊಟ್ಟಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!