ಹಿರಿಯಡ್ಕ: ಪೆರ್ಣಂಕಿಲ ನಿವಾಸಿ ಆತ್ಮಹತ್ಯೆ

ಹಿರಿಯಡ್ಕ ಮಾ.13(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ವ್ಯಕ್ತಿಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕದ ಪೆರ್ಣಂಕಿಲದಲ್ಲಿ ನಡೆದಿದೆ.

ಹಿರಿಯಡ್ಕದ ಪೆರ್ಣಂಕಿಲ ನಿವಾಸಿ ಬಾಲಚಂದ್ರ ಸೇರಿಗಾರ ಆತ್ಮಹತ್ಯೆ ಮಾಡಿಕೊಂಡವರು. 

ಚಾಲಕರಾಗಿ ಕೆಲಸ ಮಾಡುತ್ತಿದ್ದ ಇವರು ತಮಗಿದ್ದ ಅನಾರೋಗ್ಯದಿಂದ  ಮಾನಸಿಕವಾಗಿ ನೊಂದು ಕೊಂಡಿದ್ದು, ಇದೇ ವಿಚಾರವಾಗಿ ನಿನ್ನೆ ಸಂಜೆ ವೇಳೆ  ಮನೆಯ ಕೊಟ್ಟಿಗೆ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಅಣ್ಣ ನೀಡಿದ ಮಾಹಿತಿಯಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!