ಜಿಲ್ಲಾ ರಸ್ತೆ ಸುರಕ್ಷತಾ ಯೋಜನೆ ಶೀಘ್ರ ಸಿದ್ದಪಡಿಸಿ: ಜಿಲ್ಲಾಧಿಕಾರಿ

ಉಡುಪಿ: ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಸಿದ್ದಪಡಿಸಿರುವ ಕ್ರಿಯಾ ಯೋಜನೆಯಂತೆ , ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲಿ ಸಿದ್ದಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.


ಅವರು ಶುಕ್ರವಾರ ,ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಂತೆ, ಸಾರಿಗೆ,
ಪೊಲೀಸ್,ಆರೋಗ್ಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ , ಪಂ.ರಾಜ್ ಇಂಜಿನಿಯರಿoಗ್ ಇಲಾಖೆ ಮತ್ತು ನಗರಸಭೆ ವತಿಯಿಂದ ಕ್ರಿಯಾ ಯೋಜನೆ ಸಿದ್ದಪಡಿಸಿ, ಕ್ರಿಯಾ ಯೋಜನೆಯ ಚಟುವಟಿಕೆಗಳು ಮತ್ತು ಇದಕ್ಕೆ ತಗಲುವ
ಅಂದಾಜು ವೆಚ್ಚದ ವಿವರಗಳನ್ನು ಒಂದು ವಾರದಲ್ಲಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.


ಉಡುಪಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವ ಕುರಿತಂತೆ ಸ್ಥಳ ಗುರುತಿಸಲಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆದು ಅದನ್ನು ಅನುಷ್ಠಾನ ಗೊಳಿಸುವಂತೆ ಪೌರಾಯುಕ್ತರಿಗೆ ಸೂಚಿಸಿದ ಡಿಸಿ, ನಗರದಲ್ಲಿ ಸಮರ್ಪಕ ರೀತಿಯಲ್ಲಿ
ಝೀಬ್ರಾ ಕ್ರಾಸ್ ಮತ್ತು ವೈಜ್ಞಾನಿಕ ರೀತಿಯಲ್ಲಿ ಹಂಪ್ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ರಾಷ್ಟಿಯ ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಹೆಚ್ಚಾಗಿದ್ದು, ಕಳೆದ ವರ್ಷ 260 ಪ್ರಾಣ ಕಳೆದುಕೊಂಡಿದ್ದಾರೆ, ರಸ್ತೆ ಸುರಕ್ಷತಾ ನಿಯಮಗಳಂತೆ ಅಪಘಾತ ಪ್ರಮಾಣ 10% ಗಿಂತ ಕಡಿಮೆಯಿರುವಂತೆ ಕ್ರಮ ಕೈಗೊಳ್ಳಬೇಕಿದ್ದು, ರಾ.ಹೆದ್ದಾರಿಯಲ್ಲಿನ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ ವರದಿ ನೀಡಿದ್ದು, ಆದ್ಯತೆಯ ಮೇರೆಗೆ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದರು.

ಎಲ್ಲಾ ಬ್ಲಾಕ್ ಸ್ಪಾಟ್ ಗಳಲ್ಲಿ ಅಗತ್ಯವಿರುವ ಕಾಮಗಾರಿ ಕೈಗೊಳ್ಳುವ ಕುರಿತ ಅನುಮೋದನೆಗೆ ಸಲ್ಲಿಸಿದ್ದು, ಅನುಮೋದನೆಗೊಂಡ ಬಂದ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದು ರಾ.ಹೆದ್ದಾರಿಯ ಯೋಜನಾ ನಿರ್ದೇಶಕರು ತಿಳಿಸಿದರು. ಇಂದ್ರಾಳಿಯಿoದ ಟೈಗರ್ ಸರ್ಕಲ್ ವರೆಗೆ ರಸ್ತೆ ವಿಭಜಕ ಇಲ್ಲದಿರುವುದರಿಂದ , ರಸ್ತೆ ಎರಡೂ ಬದಿ ಇರುವ ನಿವಾಸಿಗಳಿಗೆ

ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರು/ಮನವಿಗಳು ಬರುತ್ತಿದ್ದು, ಲಕ್ಷ್ಮೀಂದ್ರ ನಗರ ಅಥವಾ ಅದಕ್ಕಿಂತ ಸ್ವಲ್ಪ ಮುಂದೆ ಬಳಿ ರಸ್ತೆ ವಿಭಜಕ ನಿರ್ಮಿಸುವುದು ಅಗತ್ಯವಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು, ಈ ಬಗ್ಗೆ
ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ರಾ.ಹೆದ್ದಾರಿ 169ಎ ನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು. ಗುಂಡಿಬೈಲು –ದೊಡ್ಡಣಗುಡ್ಡೆ ರಸ್ತೆಯಲ್ಲಿ ಹಂಪ್ಸ್ ಅಳವಡಿಕೆ, ಅಜ್ಜರಕಾಡಿನ ಲಾಲ್ ಬಹದ್ದೂರ್ ಶಾಸ್ತಿç ಜಂಕ್ಷನ್ ಸಂಧಿಸುವ ರಸ್ತೆಯಲ್ಲಿ 4 ಕಡೆ ಹಂಪ್ಸ್ ಅಳವಡಿಕೆ, ಕರಂಬಳ್ಳಿ ನೇಕಾರರ ಕಾಲೋನಿ ಬಸ್ ನಿಲ್ದಾಣದ ಬಳಿ ಹೊಸ ರಿಕ್ಷಾ ನಿಲ್ದಾಣಕ್ಕೆ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವಪ್ರಭು, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!