ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಅಂಕೋಲಾ: ತಾಲ್ಲೂಕಿನ ಬೆಳಂಬಾರ ತಾಳೇಬೈಲಿನ ಶಿಲ್ಪಾ ಎಂ.ಗೌಡ (17) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಈಕೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಈಕೆ ಎರಡು ವಿಷಯದ ಪರೀಕ್ಷೆಯನ್ನು ಬರೆದಿದ್ದಳು.
‘ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದಳು. ಮಾಹಿತಿ ತಿಳಿದ ಯುವತಿಯ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲೇ ಯುವತಿಯ ಪ್ರಾಣಪಕ್ಷಿ ಹಾರಿಹೊಗಿತ್ತು ಪೊಲೀಸರು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ನಿರೀಕ್ಷೆಯಷ್ಟು ಚೆನ್ನಾಗಿ ಬರೆಯದೇ ಇರುವುದರಿಂದ ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ.