5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ರಾಜ್ಯದಲ್ಲಿ 5 ಹಾಗೂ 8ನೇ ತರಗತಿ ಮೌಲ್ಯಂಕನ ಪರೀಕ್ಷಾ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮಾ.27ರಿಂದ ಪರೀಕ್ಷೆ ಆರಂಭವಾಗಲಿದ್ದು, ಏ.1ರವರೆಗೆ ಪರೀಕ್ಷೆ ನಡೆಯಲಿದೆ.
5-8ನೇ ತರಗತಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ:
ಮಾ.27- ಸೋಮವಾರ- ಪ್ರಥಮ ಭಾಷೆ ಕನ್ನಡ
ಮಾ.28- ಮಂಗಳವಾರ – ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡ
ಮಾ.29- ಬುಧವಾರ- ತೃತೀಯ ಭಾಷೆ ಹಿಂದಿ ಅಥವಾ ಪರಿಸರ ಅಧ್ಯಯನ
ಮಾ.30- ಗುರುವಾರ – ಗಣಿತ
ಮಾ.31- ಶುಕ್ರವಾರ- ವಿಜ್ಞಾನ
ಏ.1- ಶನಿವಾರ – ಸಮಾಜ ವಿಜ್ಞಾನ.
2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಏ.1ರವರೆಗೆ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ. ಈಗಾಗಲೇ 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13ರಿಂದ ಮೌಲ್ಯಾಂಕನವನ್ನು ನಿಗದಿಪಡಿಸಲಾಗಿತ್ತು. ಆದರೆ, ಉಚ್ಛ ನ್ಯಾಯಾಲಯದ ಆದೇಶದಂತೆ ಪರೀಕ್ಷೆಯನ್ನು ಮುಂದೂಡಲಾಗಿತ್ತು.
ಹೀಗಿದೆ ಪ್ರಶ್ನೆಪತ್ರಿಕೆ ಸ್ವರೂಪ:
5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತಿದೆ.
ಪ್ರತಿ ವಿಷಯದ ಮೌಲ್ಯಾಂಕನಕ್ಕೆ 2 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.
ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ (1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು) ಪ್ರತ್ಯೇಕ ಪ್ರಶೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ.
10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ.
40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸುವುದು,
ವಿದ್ಯಾರ್ಥಿಗಳನ್ನು ಮೌಲ್ಯಾಂಕನಕ್ಕೆ ಸಿದ್ಧಗೊಳಿಸಲು ಮಾದರಿ ಪ್ರಶೋತ್ತರ ಮತ್ತು ಮೌಲ್ಯಾಂಕನಕ್ಕೆ ಒಳಪಡಿಸಿರುವ ಪಠ್ಯಪುಸ್ತಕದಲ್ಲಿನ ಘಟಕಗಳ ವಿವರಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಹೈಕೋರ್ಟ್ ಆದೇಶದಂತೆ ದಿನಾಂಕ ನಿಗದಿ: ಈ ಕುರಿತು ಆದೇಶ ನೀಡಿರುವ ಹೈಕೋರ್ಟ್ ಮಾ.27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿದೆ. ಅದರಂತೆ 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಮಾ.30ರವರೆಗೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27ರಿಂದ ಏ.1ರವರೆಗೆ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಆಯಾ ಶಾಲೆಗಳನ್ನೇ ಮೌಲ್ಯಾಂಕನ ಕೇಂದ್ರಗಳಾಗಿ ಪರಿಗಣಿಸಿದೆ.