ಕುಂದಾಪುರ: ವ್ಯವಸ್ಥಾಪನಾ ಸಮಿತಿ ರಚನೆ- ಅರ್ಜಿ ಆಹ್ವಾನ

ಉಡುಪಿ, ಮಾ.18: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯ ಪ್ರವರ್ಗ ಸಿ ಸಂಸ್ಥೆಯಾದ ಕುಂದಾಪುರ ತಾಲೂಕು ನೂಜಾಡಿ ಶ್ರೀ ನರಸಿಂಹ ದೇವಸ್ಥಾನ ಸಂಸ್ಥೆಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!