ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ
ನವದೆಹಲಿ: ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕೆಲವೇ ದಿನದಲ್ಲಿ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಂದಿನ ಏಪ್ರಿಲ್ 22 ರೊಳಗೆ ತುಘಲಕ್ ಲೇನ್ 12 ನಲ್ಲಿ ಸರ್ಕಾರದಿಂದ ಮಂಜೂರು ಮಾಡಲಾದ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆಯ ಸದನ ಸಮಿತಿ ನೋಟಿಸ್ ನೀಡಿದೆ.
ನಿಯಮದ ಪ್ರಕಾರ, ಅನರ್ಹಗೊಂಡ ಸಂಸದರು ಸರ್ಕಾರಿ ವಸತಿಗೆ ಅರ್ಹರಲ್ಲ ಹಾಗಾಗಿ ಬಂಗಲೆಯನ್ನು ಖಾಲಿ ಮಾಡಲು ಸಮಿತಿ 30 ದಿನಗಳ ಕಾಲಾವಕಾಶ ನೀಡಿದೆ.
2004 ರಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್ ಗಾಂಧಿ ಲೋಕಸಭೆಯ ಸಂಸದರಾಗಿರುವುದು ನಾಲ್ಕನೇ ಅವಧಿಯಾಗಿದೆ. 2019 ರಲ್ಲಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಮತ್ತೆ ಆಯ್ಕೆಯಾಗಿದ್ದರು.
2019 ರ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ಮರುದಿನವೇ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು.