ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು ಬಂಧಿಸಿದ ಲೋಕಾಯುಕ್ತ ಪೊಲೀಸ್

ದಾವಣಗೆರೆ, ಮಾ.27: ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಅವರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಸೋಮವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಅಂತಿಮ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!