ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಗುಜರಾತ್ ಕೋರ್ಟ್

ನವದೆಹಲಿ: ಮೋದಿ ಉಪನಾಮದ ಬಗ್ಗೆ ನೀಡಿರುವ ಹೇಳಿಕೆಗೆ 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಂದು ಗುಜರಾತ್ ನ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರ ಕಾನೂನು ತಂಡವು ಸೂರತ್ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ರಾಹುಲ್ ಗಾಂಧಿ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Leave a Reply

Your email address will not be published. Required fields are marked *

error: Content is protected !!