ಉಡುಪಿ: ಸೆ.13, 126 ಕೊರೋನಾ ಪಾಸಿಟಿವ್, 2039 ಜನರಲ್ಲಿ ನೆಗೆಟಿವ್

ಉಡುಪಿ (ಉಡುಪಿ ಟೈಮ್ಸ್ ವರದಿ): ಇಂದು (ಸೆ.13) 126 ಜನರಲ್ಲಿ ಕೊರೋನಾ ಸೋಂಕು ಪಾಸಿಟಿವ್ ದೃಢ ಪಟ್ಟಿದೆ, 2039 ಜನರಲ್ಲಿ ರಿಪೋರ್ಟ್ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಮೃತ ಪಟ್ಟ ಬಗ್ಗೆ ವರದಿಯಾಗಿಲ್ಲ, ಮೃತರ ಸಂಖ್ಯೆ 130.

ಉಡುಪಿ -53, ಕುಂದಾಪುರ -47, ಕಾರ್ಕಳ 20 ಮಂದಿಗೆ ಪಾಸಿಟಿವ್ ದೃಢವಾಗಿದೆ.

ಜಿಲ್ಲೆಯಲ್ಲಿ ಸಕ್ರಿಯ ಕೇಸುಗಳು 1732 ಇದ್ದು, ಈವರೆಗೆ 12176 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. 9,894 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,59,445 ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,265ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 45 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,479 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿಕೆಯಾಗಿದೆ.

ಇಂದು 8,402 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,52,958ಕ್ಕೆ ಏರಿಕೆಯಾಗಿದೆ. 99,203 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 807 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!