ಉಡುಪಿ: ಏ.11 ರಂದು ವಿದ್ಯುತ್ ವ್ಯತ್ಯಯ

ಉಡುಪಿ, ಏ.07: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
33/11 ಕೆ.ವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತಲ್ಲೂರು ಉಪಕೇಂದ್ರದಿಂದ ಹೊರಡುವ 11 ಕೆ.ವಿ ಹೆಮ್ಮಾಡಿ, ಗುಲ್ವಾಡಿ, ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ದೇವಲ್ಕುಂದ ಮತ್ತು ಸಬ್ಲಾಡಿ ಹಾಗೂ 33/11 ಕೆ.ವಿ ಗಂಗೊಳ್ಳಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮುಳ್ಳಿಕಟ್ಟೆ, ತ್ರಾಸಿ, ಗಂಗೊಳ್ಳಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ತಲ್ಲೂರು, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್ಬೆಲ್ತೂರು ಮತ್ತು ದೇವಲ್ಕುಂದ, ಮುಳ್ಳಿಕಟ್ಟೆ, ಗಂಗೊಳ್ಳಿ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶ.

33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಎಂ.ಯು.ಎಸ್. ಎಸ್ ನಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಶಿರ್ವ, ಮಟ್ಠಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು, ಬಡಾ ಮೂಳೂರು, ಬೆಳಪು, ಮಲ್ಲಾರು, ಅಬ್ಬೆಟ್ಟು, ಪಾದೂರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚೇರ್ಕಾಡಿ, ಉಪ್ಪೂರು, ಹೊನ್ನಾಳ, ಕೊಳಲಗಿರಿ ಫೀಡರ್ ಮಾರ್ಗ ಹಾಗೂ 110/11 ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಶಾಂತಿವನ ಫೀಡರ್ ಮಾರ್ಗ ಮತ್ತು 110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ.ರೋಡ್, ಕೋಟೆರೋಡ್, ನಿಡಂಬಳ್ಳಿ, ಕಲ್ಯಾಣಪುರ, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಉಗ್ಗೇಲ್ಬೆಟ್ಟು, ಜಾತಾಬೆಟ್ಟು, ಹಾವಂಜೆ, ಮಂದಾರ್ತಿ, ಕಾಡೂರು, ತಂತ್ರಾಡಿ, ಹೆಗ್ಗುಂಜೆ, ಕಾಡೂರು, ನಡೂರು, ಹೆಬ್ಬಾಡಿ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!