ಬೆಳ್ತಂಗಡಿ: ಗ್ರಾಮಾಭಿವೃದ್ದಿ ಯೋಜನೆಯ ಯುವತಿಯರಿಬ್ಬರ ನಿಗೂಢ ಸಾವು
ಬೆಳ್ತಂಗಡಿ: ಹೊಟ್ಟೆ ನೋವಿನಿಂದ ನರಳಿ ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಪಟ್ರಮೆ ಗ್ರಾಮದ ಪಟ್ಟೂರು ಬಾಬು ಅವರ ಪುತ್ರಿ ರಕ್ಷಿತಾ (22) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ಮೃತಪಟ್ಟರೆ, ನೆರೆ ಮನೆಯವರಾದ ಶ್ರೀನಿವಾಸ ಆಚಾರ್ಯ ಅವರ ಪುತ್ರಿ ಲಾವಣ್ಯ (21) ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ. ಇವರಲ್ಲಿ ರಕ್ಷಿತಾ ವಿಷ ಪದಾರ್ಥ ಸೇವಿಸಿರುವುದು ಮರಣೋತ್ತರ ಪರಿಕ್ಷೆಯಲ್ಲಿ ದೃಢಪಟ್ಟಿದೆ. ಲಾವಣ್ಯಾ ಸಾವಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಇವರಿಬ್ಬರು ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಎ. 4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ಮನೆಯಲ್ಲಿ ಹೊಟ್ಟೆ ನೋವೆಂದು ಹೇಳಿ ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮನೆಯವರು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಸುರತ್ಕಲ್‌ನ ಆಸ್ಪತ್ರೆಗೆ ದಾಖಲಿಸಿದ್ದರು. ಇವರ ಸಾವಿಗೆ ಕಾರಣ ಏನು ಎಂದು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರ
ಬಹುದೆಂದು ಶಂಕಿಸಲಾಗಿದೆ.