ಬ್ರಹ್ಮಾವರ: ಬಾರ್ಕೂರಿನ ಗೃಹಿಣಿ ಆತ್ಮಹತ್ಯೆ

ಬ್ರಹ್ಮಾವರ ಎ.8 (ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾರ್ಕೂರಿನ ಹನೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ರಶ್ಮಿ (35) ಆತ್ಮಹತ್ಯೆ ಮಾಡಿಕೊಂಡವರು. 

ಇವರು ತಮಗಿದ್ದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಮನನೊಂದು ಜೀವನದಲ್ಲಿ ಜೀಗುಪ್ಸೆಗೊಂಡು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಎದುರಿನ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಪತಿ ಯೋಗೀಶ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!