ಬೆಳ್ತಂಗಡಿ: ವಿಷ ಸೇವಿಸಿ ಗ್ರಾಮೀಣಾಭಿವೃದ್ಧಿ ಪ್ರತಿನಿಧಿಗಳಿಬ್ಬರ ಸಾವು

ಬೆಳ್ತಂಗಡಿ: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಸಂಶಯಾಸ್ಪಾದವಾಗಿ ಎ.6 ರಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರೂ ವಿಷ ಸೇವಿಸಿದ್ದೇ ಕಾರಣ ಎನ್ನುವುದು ತನಿಖೆಯಿಂದ ಬಯಲಾಗಿದೆ.

ಘಟನೆಯಲ್ಲಿ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃಪಟ್ಟಿದ್ದು. ಬಳಿಕ ಲಾವಣ್ಯ ಬಳಿಕ ಕೊನೆಯುಸಿರು ಎಳೆದಿದ್ದರು.

ಇವರಿಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ವಿಷಪ್ರಾಶನ ಮಾಡಿದ್ದರು ಎನ್ನುವ ಅನುಮಾನ ಸ್ಥಳೀಯರು ವ್ಯಕ್ತಪಡಿಸಿದ್ದರು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಧರ್ಮಸ್ಥಳ ಪೊಲೀಸ್‌ ಠಾಣೆ ಎಸ್‌.ಐ. ಅನಿಲ್‌ ಹಾಗೂ ಸಿಬಂದಿ ಮೃತರ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಇಬ್ಬರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಗಳಾಗಿ ದುಡಿಯುತ್ತಿದ್ದರು. ಇಬ್ಬರು ಉತ್ತಮ ಸೇವೆ ಸಲ್ಲಿಸುತ್ತಿದ್ದರು ಹಾಗೂ ಊರಿನಲ್ಲಿ ಇವರ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಈ ಪೈಕಿ ಲಾವಣ್ಯ ಮಾರ್ಚ್‌ ವರ್ಷಾಂತ್ಯಕ್ಕೆ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ರಕ್ಷಿತಾ ಸೇವೆಯಲ್ಲಿ ಮುಂದುವರದಿದ್ದರು. ಇವರ ಮಧ್ಯೆ ಯಾವುದಾದರು ಘಟನೆ ಸಂಭವಿಸಿ ಆಘಾತದಿಂದ ವಿಷಪ್ರಾಶನ ಮಾಡಿದ್ದಾರೆಯೇ ಎಂಬ ಅನುಮಾನ ಕಾಡಿದೆ.

ಈ ಬಗ್ಗೆ ಮನೆಯವರಿಗೂ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಎಫ್‌.ಎಸ್‌.ಎಲ್‌. ವರದಿಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷಿಯಿದ್ದು, ಈ ಮಧ್ಯೆ ಬೇರೆ ಆಯಾಮಗಳಲ್ಲೂ ತನಿಖೆ ಮುಂದುವರಿಸಲಾಗಿದೆ ಎಂದು ದ.ಕ.ಜಿಲ್ಲಾ ಎಸ್‌.ಪಿ. ಅಮಟೆ ವಿಕ್ರಮ್‌ ತಿಳಿಸಿದ್ದಾರೆ.

ಮೃತ ರಕ್ಷಿತಾ ಹಾಗೂ ಲಾವಣ್ಯ ಅವರ ಮನೆಗೆ ಶನಿವಾರ ಶಾಸಕ ಹರೀಶ್‌ ಪೂಂಜ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಈ ವೇಳೆ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್‌ ಆಲಂಬಿಲ, ಪಟ್ರಮೆ ಗ್ರಾ.ಪಂ. ಉಪಾಧ್ಯಕ್ಷರಾದ ಯತೀಶ್‌, ಗ್ರಾ.ಪಂ. ಸದಸ್ಯರಾದ ಮನೋಜ್‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!