ಟಿಎಂಸಿ, ಎನ್ಸಿಪಿ, ಸಿಪಿಐಗೆ ರಾಷ್ಟ್ರೀಯ ಪಕ್ಷ ಮಾನ್ಯತೆ ಇಲ್ಲ
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಇಂದು ಘೋಷಣೆ ಮಾಡಿದೆ.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ (ಎನ್ಸಿಪಿ) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ ಕಳೆದುಕೊಂಡಿವೆ.
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿ ಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನ ಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.
ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಬಹುಜನ ಸಮಾಜ ಪಕ್ಷ (ಬಿಎಸ್ಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಮತ್ತು ಎಎಪಿ ಈಗ ರಾಷ್ಟ್ರೀಯ ಪಕ್ಷಗಳಾಗಿವೆ.