ಇಂದಿನಿಂದ ಸರ್ಕಾರಕ್ಕೆ ಕೊರೋನಾ ವರದಿ ಸಲ್ಲಿಕೆ ಇಲ್ಲ: ಸರ್ಕಾರಿ ವೈದ್ಯಾಧಿಕಾರಿಗಳ ಸಂಘ

ಉಡುಪಿ: ವೇತನ ಪರಿಷ್ಕರಣೆ ಸೇರಿದಂತೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ 12 ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದರೂ ಸ್ಪಂದನ ಸಿಕ್ಕಿಲ್ಲ. ಹಾಗಾಗಿ, ಸೆ.15ರಿಂದ ಕೋವಿಡ್‌ ಹಾಗೂ ಕೋವಿಡೇತರ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವುದಿಲ್ಲ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಪ್ರಕಾಶ್‌ ಕುಮಾರ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 15ರಿಂದ 20ರವರೆಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಕಾರ್ಯವನ್ನು ಸ್ಥಗಿತಗೊಳಿಸುತ್ತೇವೆ. ಬಳಿಕ ಸರ್ಕಾರದ ಸಭೆಗಳಿಗೆ ಹಾಜರಾಗುವುದಿಲ್ಲ. 21ರಿಂದ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳಿಂದ ದೂರ ಉಳಿಯಲಿದ್ದೇವೆ. ಬಳಿಕ ಬೆಂಗಳೂರು ಚಲೋ ಜಾಥಾ ಮಾಡಲಿದ್ದು, ಅಲ್ಲಿ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು ಎಂದರು.

‘ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ ದ್ವಿಗುಣ ವೇತನ ನೀಡಲಾಗುತ್ತಿದೆ. 7ನೇ ವೇತನ ಶ್ರೇಣಿ ಜಾರಿ ಮಾಡಲಾಗಿದೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳಿಗೂ ವೇತನ ಪರಿಷ್ಕರಣೆ ಮಾಡಬೇಕು ಎಂಬುದಷ್ಟೆ ಪ್ರಮುಖ ಬೇಡಿಕೆ’ ಎಂದರು.

‘ರಾಜ್ಯದಲ್ಲಿ 6,619 ವೈದ್ಯರ ಹುದ್ದೆಗಳಿದ್ದು, ಪ್ರಸ್ತುತ 4,798 ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. 1,000ಕ್ಕೂ ಹೆಚ್ಚು ವೈದ್ಯರ ಕೊರತೆಯಿದ್ದು, ಹೆಚ್ಚುವರಿ ಕಾರ್ಯಭಾರ ನಿಭಾಯಿಸುತ್ತಿದ್ದೇವೆ. 6 ತಿಂಗಳಿನಿಂದ ಹಗಲಿರುಳು ಶ್ರಮಿಸುತ್ತಿದ್ದೇವೆ. 48 ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಆದರೂ, ಸರ್ಕಾರ ವೇತನ ನೀಡುವ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹಲವು ವರ್ಷಗಳಿಂದ ವೈದ್ಯಾಧಿಕಾರಿಗಳ ಮೂಲ ವೇತನವನ್ನೇ ಪರಿಷ್ಕರಣೆ ಮಾಡಿಲ್ಲ’ ಎಂದು ಟೀಕಿಸಿದರು. ಡಾ.ನರಸಿಂಹ ನಾಯಕ್‌, ಡಾ.ಗೋಪಾಲ್‌, ಉಮೇಶ್ ನಾಯಕ್‌, ಡಾ.ರಂಜಿತ್‌, ಡಾ.ಪ್ರತಾಪ್‌ ಕುಮಾರ್‌ ಇದ್ದರು.

‘ಪಂಜಾಬ್‌, ಹರಿಯಾಣ, ಬಿಹಾರ, ಅಸ್ಸಾಂ ಸೇರಿದಂತೆ 12 ರಾ‌ಜ್ಯಗಳಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಮಾದರಿಯ ವೇತನ ರಾಜ್ಯದಲ್ಲೂ ಜಾರಿಯಾಗಬೇಕು’

ಐಎಎಸ್ ಅಧಿಕಾರಿಗಳ ತಮ್ಮನ್ನು ಮುಕ್ತ ಮಾಡಬೇಕು. ನಂಜನಗೂಡು ಆಸ್ಪತ್ರೆ ವೈದ್ಯರ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವೇತನ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ರಾಜ್ಯ ವೈದ್ಯಕೀಯ ಸಂಘ ಸರ್ಕಾರದ ಮುಂದೆ ಇಟ್ಟಿದೆ.

ಬೇಡಿಕೆಗಳು ಏನೇನು?
* ಸರ್ಕಾರದಿಂದ ಡಾಕ್ಟರ್ಸ್ ಡೇ ಮಾಡುವಂತೆ ಬೇಡಿಕೆ
* ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡಿಲ್ಲ, ಪರಿಹಾರ ನೀಡುವಂತೆ ಬೇಡಿಕೆ
* ಪ್ರಮುಖವಾಗಿ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯ
* ಬಿಬಿಎಂಪಿಗೆ ನೀಡಿರುವ 48 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನ ವಾಪಸ್ ನೀಡುವಂತೆ ಒತ್ತಾಯ
* ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಿಬೇಕು

ಪ್ರತಿಭಟನೆ ಯಾವ ರೀತಿ ಇರುತ್ತೆ ?
* ಇಂದಿನಿಂದ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
* ಆನ್‍ಲೈನ್ ಆಗಲಿ ಅಥವಾ ಆಫ್‍ಲೈನ್ ಆಗಲಿ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
* ಕೋವಿಡ್ ರಿಪೋರ್ಟ್ ಗಳನ್ನು ಸಲ್ಲಿಸದಿರಲು ನಿರ್ಧಾರ
* ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
* ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ
* ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲಿ ಭಾಗವಹಿಸದಿರಲು ನಿರ್ಧಾರ

ಸರ್ಕಾರ ವೈದ್ಯರ ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
* ಕೋವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೋವಿಡ್ ಕೇಸ್ ಹೆಚ್ಚಾಗ್ತಾವೆ
* ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಆಸ್ಪತ್ರೆ ಕ್ಲೋಸ್ ಮಾಡಿದ್ರೆ ಕೋವಿಡ್ ಉಲ್ಬಣಗೊಳ್ಳುತ್ತೆ
* ರಾಜ್ಯದಲ್ಲಿ ಸಾವು ನೋವು ಹೆಚ್ಚಾಗುವ ಸಾಧ್ಯತೆ
* ರಾಷ್ಟ್ರೀಯ ಕಾರ್ಯಕ್ರಮಗಳ ವರದಿ ನೀಡದಿದ್ದರೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮರ್ಯಾದೆ ಹೋಗುತ್ತೆ
* ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ
* ಡಿಸಿ ಮತ್ತು ಸಿಇಓ ಮೀಟಿಂಗ್‍ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಅಟೆಂಡ್ ಆಗದಿದ್ದರೆ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಷ್ಟ.

ಇಂದಿನಿಂದ ಒಂದು ವಾರದ ಒಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆಗಳನ್ನು ಕ್ಲೋಸ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಇದೇ ತಿಂಗಳ 21 ರಿಂದ ಆಸ್ಪತ್ರೆ ಕ್ಲೋಸ್ ಮಾಡಲು ನಿರ್ಧಾರ ಮಾಡಲಾಗಿದ್ದು, ಎಮರ್ಜೆನ್ಸಿ ಮಾತ್ರ ಓಪನ್ ಮಾಡಲಾಗುತ್ತಿದೆ. ಅಲ್ಲದೇ ಸೆಪ್ಟೆಂಬರ್ 21 ರಿಂದ ಬೆಂಗಳೂರು ಚಲೋ ಆರಂಭ ಮಾಡಲಿದ್ದಾರೆ. ಬೆಂಗಳೂರು ಚಲೋ ಆರಂಭ ಮಾಡಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!