ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್‌ ಅವರು ಸೋಮವಾರ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಇಲ್ಲಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದರು.

ಪಕ್ಷ ಸೇರ್ಪಡೆಯಾದ ಶೆಟ್ಟರ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!