ಕಾರ್ಕಳ: ಏ.19 ರಂದು ಸಚಿವ ವಿ.ಸುನಿಲ್ ಕುಮಾರ್ ನಾಮಪತ್ರ

ಕಾರ್ಕಳ: ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ ಸುನಿಲ್‌ ಕುಮಾರ್‌ ಏ.19 ರಂದು ಬೆಳಿಗ್ಗೆ 10.00 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಪ್ರಯುಕ್ತ ಸ್ವರಾಜ್‌ ಮೈದಾನದಿಂದ ಕಾರ್ಕಳ ಬಸ್ಸು ನಿಲ್ದಾಣ-ಬಂಡೀಮಠ ಮಾರ್ಗವಾಗಿ ರ‍್ಯಾಲಿ ಮುಖಾಂತರ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್‌ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!