ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಬೇಕು: ಕುಯಿಲಾಡಿ
ಉಡುಪಿ : ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಕಾರ್ಯಕರ್ತರು ಪಣತೊಡಬೇಕು ಮತ್ತು ಈ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ನೂತನ ಅಧ್ಯಕ್ಷ ನಿತ್ಯಾನಂದ ನಾಯ್ಕ್ ಚಾಂತಾರು ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿಸಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಪಕ್ಷದಲ್ಲಿ ಪದಾಧಿಕಾರಿಗಳು ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಲು 3 ವರ್ಷಗಳ ಅವಧಿಯನ್ನು ಹೊಂದಿರುತ್ತಾರೆ. ಈ ಅವಧಿಯಲ್ಲಿ ತಮ್ಮ ಜವಾಬ್ದಾರಿಗಳನ್ನು ಅರಿತು ಪಕ್ಷ ಸಂಘಟನೆ ಹಾಗೂ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ನಿಶ್ಚಿತವಾಗಿ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ. ವಿವಿಧ ಸಮುದಾಯಗಳನ್ನು ಒಂದೇ ಸೂರಿನಡಿ ಒಗ್ಗೂಡಿಸಿ ಸಂಘಟಿಸುವುದು ಸುಲಭದ ಮಾತೇನಲ್ಲ. ಆದರೆ ನಿರಂತರ ಪ್ರಯತ್ನ ಮತ್ತು ಕಠಿಣ ಪರಿಶ್ರಮದಿಂದ ಇದು ಸುಲಭಸಾಧ್ಯವಾಗಲಿದೆ. ಈ ಹಿಂದೆ ಎಸ್.ಸಿ. ಮತ್ತು ಎಸ್.ಟಿ. ಸಮುದಾಯವನ್ನು ಕಾಂಗ್ರೆಸ್ ಕೇವಲ ತನ್ನ ಮತ ಬ್ಯಾಂಕಾಗಿ ಬಳಸಿಕೊಂಡಿತ್ತು. ಆದರೆ ಇಂದಿನ ಪೀಳಿಗೆ ಸತ್ಯವನ್ನು ಅರಿತುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ತತ್ವಾದರ್ಶಗಳು, ಸಮರ್ಥ ನಾಯಕತ್ವ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳತ್ತ ಜನತೆ ಆಕರ್ಷಿತರಾಗಿದ್ದಾರೆ ಎಂದು ತಿಳಿಸಿದ ಕುಯಿಲಾಡಿ ಬಿಜೆಪಿ ಎಂದಿಗೂ ಕುಟುಂಬ ರಾಜಕಾರಣವನ್ನು ಅನುಸರಿಸುವುದಿಲ್ಲ. ಪಕ್ಷ ಹೊಸ ಮುಖಗಳಿಗೆ ಹಾಗೂ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡುತ್ತದೆ. ಬಿಜೆಪಿ ಬಲಿಷ್ಠ ರಾಷ್ಟ್ರ ನಿರ್ಮಾಣದ ಕಡೆಗೆ ಸದೃಢವಾಗಿ ಸಾಗುತ್ತಿದ್ದು. ಇದರ ಮುಖ್ಯ ಉದ್ದೇಶವೆಂದರೆ ಜನಸಾಮಾನ್ಯ ಅಥವಾ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂಬುದಾಗಿದೆ. ಈ ನಿಟ್ಟಿನಲ್ಲಿ ಶ್ರೇಷ್ಠ ಭಾರತ ನಿರ್ಮಾಣದತ್ತ ಎಲ್ಲಾ ಸಮುದಾಯಗಳ ಜನತೆ ಬಿಜೆಪಿ ಜತೆ ಕೈಜೋಡಿಸಬೇಕಾಗಿದೆ ಎಂದು ಕುಯಿಲಾಡಿ ಹೇಳಿದರು.
ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್ ಚಾಂತಾರು ಮಾತನಾಡಿ ಮುಂಬರಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಂತರದ ಗೆಲುವಿಗೆ ಅಹರ್ನಿಶಿ ಶ್ರಮಿಸುವ ಜೊತೆಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಸೋಲಿಸಲು ಸರ್ವರ ಸಂಘಟಿತ ಪ್ರಯತ್ನದಿಂದ ಎಸ್.ಟಿ. ಮೋರ್ಚಾವನ್ನು ಜಿಲ್ಲೆಯಲ್ಲೇ ಮಾದರಿ ಮೋರ್ಚಾವನ್ನಾಗಿ ರೂಪಿಸಲು ಎಲ್ಲರ ಸಹಕಾರವನ್ನು ಕೋರಿದರು.
ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಎಸ್.ಟಿ. ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಎಸ್.ಟಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ್ ಮತ್ತು ನೂತನ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಎಸ್.ಟಿ. ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೆ. ಪುತ್ರನ್ ಹೆಬ್ರಿ ಸ್ವಾಗತಿಸಿ. ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಗೌಡ ಈದು ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ ವಿ. ಕುಂದಾಪುರ ವಂದಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಎಸ್.ಟಿ. ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಎಸ್.ಟಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ್ ಮತ್ತು ನೂತನ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಎಸ್.ಟಿ. ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೆ. ಪುತ್ರನ್ ಹೆಬ್ರಿ ಸ್ವಾಗತಿಸಿ. ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಗೌಡ ಈದು ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ ವಿ. ಕುಂದಾಪುರ ವಂದಿಸಿದರು.