ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬಾಕಿ ಉಳಿದ ಎರಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿದೆ.

ಮಾನ್ವಿ- ಬಿ.ವಿ. ನಾಯಕ್, ಶಿವಮೊಗ್ಗ ನಗರ ಕ್ಷೇತ್ರ ಚನ್ನ ಬಸಪ್ಪ ಅವರು ಟಿಕೆಟ್ ದಕ್ಕಿಸಿಕೊಂಡಿದ್ದಾರೆ.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶಾಸಕರಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಿಸಿದೆ. ಇದರಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ.

ಇನ್ನು ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಬಿ.ವಿ. ನಾಯಕ್ ಅವರಿಗೆ ಟಿಕೆಟ್ ನೀಡಿದೆ.

Leave a Reply

Your email address will not be published. Required fields are marked *

error: Content is protected !!