ಮುಂದಿನ ಆರು ತಿಂಗಳು ವಲಸೆ ಕಾರ್ಮಿಕರ ಖಾತೆಗೆ 7,500 ರು ಹಣ ಹಾಕಿ: ಸೋನಿಯಾ ಗಾಂಧಿ
ನವದೆಹಲಿ: ವಲಸೆ ಕಾರ್ಮಿಕರ ಕಷ್ಚವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸುತ್ತಿಲ್ಲ, ಅವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ವಲಸೆ ಕಾರ್ಮಿಕರಿಗೆ ಸರ್ಕಾರ ಮುಂದಿನ ಆರು ತಿಂಗಳು ಪ್ರತಿ ತಿಂಗಳು 7,500 ರು ಹಣ ನೀಡಲಿ ಎಂದು ಆಗ್ರಹಿಸಿದ್ದಾರೆ. ಕಳೆದ 2 ತಿಂಗಳಿಂದ ಲಾಕ್ ಡೌನ್ ನಿಂದಾಗಿ ಅಪಾರ ಪ್ರಮಾಣದ ಸಮಸ್ಯೆಗಳು ಉಂಟಾಗಿವೆ, ಆರ್ಥಿಕ ವ್ಯವಸ್ಥೆಯಲ್ಲಿ ಅನೇಕ ತೊಂದರೆಗಳು ಉಂಟಾಗಿದೆ.
ಸ್ವಾತಂತ್ರ್ಯಾನಂತರ ಭಾರತದಲ್ಲಿ ಇದೇ ಮೊದಲ ಬಾರಿಗೆ ವಲಸೆ ಕಾರ್ಮಿಕರಿಗೆ ಇಷ್ಟು ದೊಡ್ಡ ಪ್ರಮಾಣದ ನೋವು ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಹಲವರು ಕೆಲಸ ಕಳೆದುಕೊಂಡಿದ್ದಾರೆ, ಅನೇಕ ಕಾರ್ಖಾನೆಗಳು ಮುಚ್ಚಿವೆ ಎಂದು ಆರೋಪಿಸಿದ್ದಾರೆ.