ಉಡುಪಿ-1, ದಕ-316, ರಾಜ್ಯದಲ್ಲಿ 7,576 ಮಂದಿಗೆ ಕೊರೋನಾ ಪಾಸಿಟಿವ್
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 7,576 ಮಂದಿ ಕೊರೋನಾಗೆ ತುತ್ತಾಗಿದ್ದರೆ 97 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 97 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,084 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,76,712ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 3,084 ಮಂದಿಗೆ ಸೋಂಕು ದೃಢವಾಗಿದ್ದು, 41 ಮಂದಿ ಸಾವನ್ನಪ್ಪಿದ್ದಾರೆ.
ಬೆಳಗಾವಿ 249, ಚಿಕ್ಕಮಗಳೂರು 262, ದಕ್ಷಿಣ ಕನ್ನಡ 316, ದಾವಣಗೆರೆ 405, ಹಾಸನ 291, ಮೈಸೂರು 312, ಶಿವಮೊಗ್ಗ 368, ತುಮಕೂರು 223 ಮಂದಿಯಲ್ಲಿ ಇಂದು ಸೋಂಕು ಪತ್ತೆಯಾಗಿದೆ.
ಇಂದು 7,406 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,69,299ಕ್ಕೆ ಏರಿಕೆಯಾಗಿದೆ. 98,536 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.