ಹಿಂದೂ, ಮುಸ್ಲಿಮ್ ಹಾಗೂ ಕ್ರೈಸ್ತರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು- ಬಿಎಸ್‌ವೈ

ಹುಬ್ಬಳ್ಳಿ: ‘ಹಿಂದೂ, ಮುಸ್ಲಿಮ್ ಹಾಗೂ ಕ್ರೈಸ್ತರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು’ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅವರು ಬುಧವಾರ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.

‘ಈ ಮತಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ‘ಭಾಗ್ಯಲಕ್ಷ್ಮಿ’ ಯೋಜನೆಯ ಶೇ.90 ರಷ್ಟು ಪ್ರಯೋಜನವನ್ನು ಮುಸ್ಲಿಮ್ ಮಹಿಳೆಯರು ಪಡೆದಿದ್ದಾರೆ. ಈ ಕ್ಷೇತ್ರ ಅಭಿವೃದ್ಧಿಗೆ ನಮ್ಮ ಪಕ್ಷದ ಅಭ್ಯರ್ಥಿ ಡಾ.ಕ್ರಾಂತಿಕಿರಣ ಅವರನ್ನು ಗೆಲ್ಲಿಸಿ ಕೊಡಿ’ ಎಂದು ಮನವಿ ಮಾಡಿದರು.

”ಈ ಬಾರಿ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಪಕ್ಷವು ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು

Leave a Reply

Your email address will not be published. Required fields are marked *

error: Content is protected !!