ಬಜರಂಗದಳ ನಿಷೇಧಿಸುವ ಪ್ರಸ್ತಾಪವಿಲ್ಲ – ಓಟಿಗಾಗಿ ವಿಷಯ ತಿರುಚುವ ಬಿಜೆಪಿ: ಪ್ರಸಾದ್‌ರಾಜ್

ಉಡುಪಿ: ಹನುಮಂತ ದೇವರು ಯಾವ ಸಂಘಟನೆಯ ವೈಯುಕ್ತಿಕ ಸೊತ್ತಲ್ಲಾ, ಬಜರಂಗದಳವನ್ನು ಸಮೀಕರಿಸುವ ಮೂಲಕ ಪಕ್ಷವೊಂದು ಭಕ್ತರ ಭಾವನೆಗೆ ಧಕ್ಕೆ ತರುವುದು ಸರಿಯಾದ ನಡೆಯಲ್ಲ ಹನುಮಂತ ದೇಶ ವಿದೇಶ ಸೇರಿದಂತೆ ಪ್ರತಿ ಭಾರತೀಯನ ಹೃದಯದಲ್ಲಿ ಪೂಜನೀಯ ದೇವರು.

ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ. ಬಿಜೆಪಿ ಓಟಿಗಾಗಿ ವಾಸ್ತವ ವಿಷಯವನ್ನು ತಿರುಚಿ ಸುಳ್ಳು ಸುದ್ದಿ ಹರಡುತ್ತಿದೆ. ಪ್ರಜ್ಞಾವಂತ ಮತದಾರರು ಇದನ್ನು ಅರಿತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸ ಬೇಕು.

ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇರುವುದಿಲ್ಲ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ, ಕೇಂದ್ರ ಸರಕಾರದಿಂದ ಕ್ರಮ ತೆಗೆದುಕೊಳ್ಳ ಬೇಕಾಗುತ್ತದೆ. ಹೀಗಾಗಿ ಬಜರಂಗದಳವನ್ನು ನಿಷೇಧಿಸುವ ಯಾವ ಪ್ರಸ್ತಾವನೆಯೂ ಕಾಂಗ್ರೆಸ್ ಮುಂದೆ ಇಲ್ಲ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸಮಾಜದ ಶಾಂತಿ, ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದೆ.
ಆದರೆ ಬಿಜೆಪಿಯು ಪ್ರಣಾಳಿಕೆಯಲ್ಲಿನ ವಿಷಯಗಳನ್ನು ತಿರುಚಿ ಹಿಂದೂಗಳು ಆರಾಧಿಸುವ ಹನುಮಂತನ ಜೊತೆ ತನ್ನ ಸಂಘಟನೆ ಭಜರಂಗದಳವನ್ನು ಹೋಲಿಕೆ ಮಾಡಿರುವುದು ಬಿಜೆಪಿಯ ನೈತಿಕ ದಿವಾಳಿತನವನ್ನು ತೋರಿಸುತ್ತದೆ.


ಬಿಜೆಪಿ ಮತಗಳಿಕೆಗಾಗಿ ದೇವರುಗಳನ್ನು ತಮಗೆ ಬೇಕಾದಂತೆ ವ್ಯಾಖ್ಯಾನಿಸುವುದು ಅವರಲ್ಲಿಯ ಅಭಿವೃದ್ಧಿಯ ಚಿಂತನೆಯ ಕೊರತೆಯಿಂದ ಧರ್ಮ ಮತ್ತು ಜಾತಿಯ ಹೆಸರಲ್ಲಿ ಸಮಾಜವನ್ನು ವಿಭಜಿಸುವ ವ್ಯಕ್ತಿ ಮತ್ತು ಸಂಘಟನೆಗಳ ವಿರುದ್ಧ ಕಠಿಣ ನಿರ್ಣಾಯಕ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಬಧ್ಧವಾಗಿದೆ.

ಇದನ್ನು ಬಿಜೆಪಿ ವಿರೋಧಿಸುತ್ತದೆ ಎಂದರೆ ಬಿಜೆಪಿ ಕಾನೂನು ಬಾಹಿರ ಚಟುವಟಿಕೆಗಳನ್ನು ಪೂಜಿಸುತ್ತದೆ ಹಾಗೂ ಪ್ರಚೋದಿಸುತ್ತದೆ ಎಂದು ಅರ್ಥ.
ಪ್ರಣಾಳಿಕೆಯಲ್ಲಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದ್ದು ಇದನ್ನು ಬಿಜೆಪಿ ವಿರೋಧಿಸುವುದರಿಂದ ಬಿಜೆಪಿಗೆ ಕಾನೂನಿನ ಮೇಲೆಯೂ ವಿಶ್ವಾಸವಿಲ್ಲ ಹಾಗೂ ಗೌರವೂ ಇಲ್ಲ ಎಂಬುದು ಸಾಬೀತಾಗಿದೆ.ಕಾಂಗ್ರೆಸ್ ಶಾಂತಿ, ಸೌಹಾರ್ದ, ಸಮಾಜ ಕಟ್ಟುವ ಉದ್ದೇಶದಿಂದ ಪ್ರಣಾಳಿಕೆಯಲ್ಲಿ ಈ ಬಗ್ಗೆ ತಿಳಿಸಿದೆ. ಆದರೆ ಜಾತಿ ಧರ್ಮ ವನ್ನು ಒಡೆದು ಆಳುವ ನೀತಿ ಅನುಸರಿಸುವ ಬಿಜೆಪಿಗೆ ಸಮಾಜದಲ್ಲಿ ಶಾಂತಿ ಸೌರ್ಹಾದತೆ ಬೇಕಾಗಿಲ್ಲ.

ಅಮಾಯಕರ ನೆತ್ತರಲ್ಲಿ ಮತ ಫಸಲು ಪಡೆಯುವ ಉದ್ದೇಶ ಹೊಂದಿರುವ ಬಿಜೆಪಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತದೆ. ಇದರಿಂದ ನೋವುಂಡ ಕರಾವಳಿ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!