ಆದಾಯ ತೆರಿಗೆ ಪ್ರಧಾನ ಆಯುಕ್ತ ಕಚೇರಿಯ ಸ್ಥಳಾಂತರ ಆದೇಶ ರದ್ದು?
ಉಡುಪಿ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ, ಆದಾಯ ತೆರಿಗೆ ಪ್ರಧಾನ ಆಯುಕ್ತ (ಪಿಸಿಐಟಿ) ಕಚೇರಿಯನ್ನು ಮಂಗಳೂರಿನಲ್ಲಿ ಉಳಿಸಿಕೊಳ್ಳುವ ಮತ್ತು ವರ್ಗಾವಣೆ ಮಾಡಲು ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಮಾತುಕತೆ ನಡೆಸಿರುವುದಾಗಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಪ್ರಕಟಣೆ ತಿಳಿಸಿದೆ.
ಮಂಗಳೂರಿನಿಂದ ಗೋವಾದ ಪನಾಜಿಗೆ ಕಚೇರಿ ವರ್ಗಾವಣೆ ಆಗದಂತೆ ಐಸಿಎಐನ ಮಂಗಳೂರು ಶಾಖೆ, ಐಸಿಎಐನ ಉಡುಪಿ ಶಾಖೆ, ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ವಿವಿಧ ವೇದಿಕೆಗಳು ನೀಡಿದ ಪ್ರಾತಿನಿಧ್ಯಕ್ಕೆ ಮಾನ್ಯ ಹಣಕಾಸು ಸಚಿವರು ಸಮ್ಮತಿಸಿರುವುದರಿಂದ ಇದು, ನಮ್ಮ ಕರಾವಳಿ ಪ್ರದೇಶಕ್ಕೆ ನಿಜಕ್ಕೂ ಒಂದು ಸಾಧನೆಯಾಗಿದೆ.
ಹೀಗಾಗಿ ಪಿಸಿಐಟಿ ಕಚೇರಿಯನ್ನು ಮಂಗಳೂರಿನಿಂದ ಗೋವಾಕ್ಕೆ ಸ್ಥಳಾಂತರಿಸುವ ಹಿಂದಿನ ಅಧಿಸೂಚನೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದ್ದು, ಕಚೇರಿಯನ್ನು ಮಂಗಳೂರಿನಲ್ಲಿ ಉಳಿಸಿಕೊಳ್ಳಲಾಗುವುದು.