ಕೊರೊನಾ ಸೋಂಕು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ರಾಯಚೂರಿನವರಾದ ಅಶೋಕ್ ಗಸ್ತಿ(55) ನಿಧನರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಗಸ್ತಿ ಅವರಿಗೆ ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ 10.31ರ ವೇಳೆಗೆ ಮೃತಪಟ್ಟಿದ್ದಾರೆ.

ಈ ಕುರಿತು ಬುಲೆಟಿನ್ ಬಿಡುಗಡೆ ಮಾಡಿರುವ ಮಣಿಪಾಲ್ ಆಸ್ಪತ್ರೆ, ಕೋವಿಡ್ 19 ಹಾಗೂ ನ್ಯುಮೋನಿಯಾದಿಂದ ಬಳುತ್ತಿದ್ದ ಅವರು ಸೆ.2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ಸಮಿತಿಯ ನಿರಂತರ ವೀಕ್ಷಣೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು-ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿಸಿದೆ.

ಎಬಿವಿಪಿಯಿಂದ ಶುರುವಾಗಿ ಆರ್‍ಎಸ್‍ಎಸ್ ನಲ್ಲಿ ಗುರುತಿಸಿಕೊಂಡಿದ್ದ ಗಸ್ತಿ ಈಗ ರಾಯಚೂರು ಬಳ್ಳಾರಿ ಕೊಪ್ಪಳ ಪ್ರಭಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಎರಡು ರಾಯಚೂರು ನಗರ ಕ್ಷೇತ್ರದ ಟಿಕೆಟ್ ಗೆ ಯತ್ನಿಸಿದ್ದರೂ ಸಿಕ್ಕಿರಲಿಲ್ಲ. ಬಿಜೆಪಿ ಹೈಕಮಾಂಡ್ ಅಶೋಕ್ ಗಸ್ತಿಯವರಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಜುಲೈ 22 ರಂದು ಅಶೋಕ್ ಗಸ್ತಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Leave a Reply

Your email address will not be published. Required fields are marked *

error: Content is protected !!