ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ
ದಾವಣಗೆರೆ: ಬಿಜೆಪಿಯ ಹಿರಿಯ ನಾಯಕ ಎಂಪಿ ರೇಣುಕಾಚಾರ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಮುಂದೆ ನೋವಿನಿಂದ ಕಣ್ಣೀರಿಟ್ಟರು.
ಆದರೆ ಈಗ ಸೋತ ಬಳಿಕ ನಾನು ಯಾರ ಬಗ್ಗೆಯೂ ಆರೋಪ ಮಾಡಲ್ಲ, ನನ್ನ ಸೋಲಿಗೆ ನಾನೇ ಕಾರಣ ಅಂತ ಭಾವಿಸುತ್ತೇನೆ. ಮತದಾರರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಅನ್ಸುತ್ತೆ. ನಾನು ಗೆದ್ದರೂ ದ್ವೇಷ ರಾಜಕಾರಣ ಮಾಡಿರಲಿಲ್ಲ ಎಂದು ಹೇಳಿದರು.
ರೇಣುಕಾಚಾರ್ಯ ನಿವಾಸದ ಮುಂದೆ ಜಮಾಯಿಸಿದ ಅಭಿಮಾನಿಗಳು ಅವರಿಗೆ ಧೈರ್ಯವನ್ನು ತುಂಬಿದ್ದಾರೆ.
ದಾವಣಗೆರೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಪಡೆದುಕೊಂಡಿದ್ದು, ಕೇವಲ ಒಂದು ಕ್ಷೇತ್ರ ಮಾತ್ರ ಬಿಜೆಪಿಗೆ ದಕ್ಕಿದೆ.
ಹೊನ್ನಾಳಿ ವಿಧಾನಸಭಾ ಕ್ಷೇತ್ರ:
ಡಿಜಿ ಶಾಂತನಗೌಡ -ಕಾಂಗ್ರೆಸ್
ಪಡೆದ ಮತಗಳು – 92,392
ಎಂಪಿ ರೇಣುಕಾಚಾರ್ಯ- ಬಿಜೆಪಿ
ಪಡೆದ ಮತಗಳು – 74,832
ಗೆಲುವು: ಕಾಂಗ್ರೆಸ್
ಅಂತರ: 17,560
People have forgotten the good work done by many politicians during covid pendamic