ಎನ್ ಐಎ ಕಾರ್ಯಾಚರಣೆ: 9 ಮಂದಿ ಅಲ್-ಖೈದಾ ಉಗ್ರರ ಬಂಧನ

ನವದೆಹಲಿ: ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ ಹಲವು ದೇಶದ ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಕೇರಳದ ಎರ್ನಾಕುಲಂನಲ್ಲಿ 11 ಕಡೆ ನಡೆಸಲಾದ ದಾಳಿಯಲ್ಲಿ ಉಗ್ರರನ್ನು ಬಂಧಿಸಲಾಗಿದೆ.

ಬಂಧಿತರ ಬಳಿ ಇದ್ದ ಡಿಜಿಟಲ್ ಉಪಕರಣ, ದಾಖಲೆಗಳು, ಜಿಹಾದಿ ಸಾಹಿತ್ಯ, ಹರಿತವಾದ ಆಯುಧಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ತಿಳಿಸಿದೆ.

ಪ್ರಾಥಮಿಕ ತನಿಖೆ ವೇಳೆ, ಈ ಉಗ್ರರನ್ನು ಪಾಕಿಸ್ಥಾನ ಮೂಲದ ಅಲ್​ ಖೈದಾ ಉಗ್ರಗಾಮಿ ಸಂಘಟನೆ, ಸೋಷಿಯಲ್ ಮೀಡಿಯಾ ಮೂಲಕ ನೇಮಕಾತಿ ಮಾಡಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇವರು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸುವುದಕ್ಕೆ ಪ್ರಚೋದಿತರಾಗಿದ್ದರು.

ಈ ಉಗ್ರರ ತಂಡ ಹಣ ಸಂಗ್ರಹ ಮಾಡಿಕೊಂಡು ದೆಹಲಿಗೆ ತೆರಳಿ ಶಸ್ತ್ರಾಸ್ತ್ರಗಳನ್ನು ಒಟ್ಟುಗೂಡಿಸುವ ಪ್ರಯತ್ನಕ್ಕೆ ಪಿತೂರಿ ನಡೆಸಿದ್ದರು ಎಂದು ತಿಳಿದುಬಂದಿದೆ. ಈ ಉಗ್ರರ ಬಂಧನದಿಂದಾಗಿ ಸಂಭಾವ್ಯ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಎನ್​ಐಎ ಹೇಳಿದೆ

Leave a Reply

Your email address will not be published. Required fields are marked *

error: Content is protected !!