ಕಾಂಗ್ರೆಸ್ ಕಾರ್ಯಕರ್ತ, ಟಿಟಿ ಚಾಲಕನ ಬರ್ಬರ ಹತ್ಯೆ

ಬೆಂಗಳೂರು, ಮೇ 25: ಕಾಂಗ್ರೆಸ್ ಕಾರ್ಯಕರ್ತನಿಗೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಗ್ಗೆರೆ ಬಳಿ ಚೌಡೇಶ್ವರಿನಗರದ ಹೋಟೆಲ್ ಬಳಿ ನಡೆದಿದೆ.

ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರವಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹೊಟೇಲ್ ವೊಂದರ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ.

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ ಎನ್ನಲಾಗಿದೆ.

ವೃತ್ತಿಯಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆದಾರನಾಗಿದ್ದ ರವಿ, ಸಂಜೆ ಕೆಲಸ ಮುಗಿಸಿ ಮನೆ ಹತ್ತಿರ ತೆರಳಿದ್ದ.ಆ ಬಳಿಕ ಬಾರ್​ಗೆ ಬಂದು ಕುಡಿದು ಏರಿಯಾದ ಕೃಷ್ಣಮೂರ್ತಿ ಎಂಬ ಕಾಂಗ್ರೆಸ್ ಮುಖಂಡನ ಬರ್ತಡೆ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಪಾರ್ಟಿ ಮುಗಿಸಿ ರವಿ ಮನೆಗೆ ಬರುವಾಗ ಹಂತಕರು ಹತ್ಯೆ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಓಡಿದ ರವಿಯನ್ನು ಅಟ್ಟಾಡಿಸಿ ಹತ್ಯೆಗೈಯ್ಯಲಾಗಿದೆ.

ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶವವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!