ಲಾಕ್ ಡೌನ್ ವೇಳೆ ಶ್ರಮಿಕ್ ವಿಶೇಷ ರೈಲುಗಳ ಪ್ರಯಾಣ ವೇಳೆ 97 ಮಂದಿ ಸಾವು: ಕೇಂದ್ರ

ನವದೆಹಲಿ: ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳ ಮೂಲಕ ವಲಸಿಗರನ್ನು ಅವರ ಊರುಗಳಿಗೆ ತಲುಪಿಸಲಾಗಿತ್ತು. ಈ ವೇಳೆ ಒಟ್ಟಾರೆ 97 ಮಂದಿ ಈ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ಸಂಸತ್ ನಲ್ಲಿ ಟಿಎಂಸಿ ಸಂಸದ ಡೇರೆಕ್ ಒಬ್ರಿಯಾನ್ ಈ ಕುರಿತಂತೆ ಪ್ರಶ್ನೆ ಎತ್ತಿದ್ದರು. ಇದಕ್ಕೆ ರೈಲ್ವೆ ಸಚಿವ ಪ್ರಿಯೂಶ್ ಗೋಯಲ್ ಲಿಖಿತ ಉತ್ತರ ನೀಡಿದ್ದಾರೆ. 

9-9-2020ರವರೆಗೂ ಸುಮಾರು 97 ಮಂದಿ ಶ್ರಮಿಕ್ ರೈಲಿನಲ್ಲಿ ಪ್ರಮಾಣಿಸಿದ್ದರು ಮೃತಪಟ್ಟಿದ್ದಾರೆ ರಾಜ್ಯ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದರು. 

ಅಸ್ವಾಭಾವಿಕ ಸಾವು ಪ್ರಕರಣಗಳಲ್ಲಿ ರಾಜ್ಯ ಪೊಲೀಸರು ಸಿ.ಆರ್.ಪಿ.ಸಿಯ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸುತ್ತಾರೆ. ಮುಂದಿನ ಕಾನೂನು ಪ್ರಕ್ರಿಯೆಯನ್ನು ಅನುಸರಿಸುತ್ತಾರೆ ಎಂದು ಸಚಿವರು ಹೇಳಿದರು.

ಸಾವಿನ 97 ಪ್ರಕರಣಗಳಲ್ಲಿ 87 ಪ್ರಕರಣಗಳಲ್ಲಿ ರಾಜ್ಯ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈವರೆಗೆ ಒಟ್ಟು 51 ಮರಣೋತ್ತರ ವರದಿಗಳನ್ನು ಆಯಾ ರಾಜ್ಯ ಪೊಲೀಸ್ ಅಧಿಕಾರಿಗಳಿಂದ ಪಡೆಯಲಾಗಿದೆ.

ಅದರಲ್ಲಿ ಹೆಚ್ಚಾಗಿ ಸಾವಿನ ಕಾರಣಗಳನ್ನು ಹೃದಯ ಸ್ತಂಭನ, ಹೃದಯ ಕಾಯಿಲೆ, ಮೆದುಳಿನ ರಕ್ತಸ್ರಾವ, ಮೊದಲೇ ಅಸ್ತಿತ್ವದಲ್ಲಿರುವ ದೀರ್ಘಕಾಲದ ಕಾಯಿಲೆ, ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ದೀರ್ಘಕಾಲದ ಯಕೃತ್ತಿನ ಕಾಯಿಲೆಯಿಂದ ಎಂದು ನಮೂದಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!