ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆ ಜಾರಿ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಮೇ 29: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.ಇನ್ನು ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!