ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂ.1: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಟಾರಿಯಾ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿ ಪಂಕಜ್ಕುಮಾರ್ ಪಾಂಡೆ ಅವರನ್ನು ರಾಜ್ಯ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಮಂಜುಳಾ ಎನ್. ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕೃಷಿ ಇಲಾಖೆಯ ಆಯುಕ್ತ ಶರತ್ ಬಿ. ಅವರನ್ನು ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.