ಉಳ್ಳಾಲ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ- ನಾಲ್ವರ ಬಂಧನ
ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಗುರುವಾರ ಸಂಜೆ ವೇಳೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ಈ ತಂಡವು ಯುವಕರ ಮೇಲೆ ಹಲ್ಲೆ ನಡೆಸಿತ್ತು. ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು.
ಉಳ್ಳಾಲ ಬಸ್ತಿಪಡು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್, ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.