ಆಗಸ್ಟ್ 15 ರಿಂದ ಗೃಹಲಕ್ಷ್ಮೀ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ‘ಗೃಹ ಲಕ್ಷ್ಮೀ’ ಯೋಜನೆಯಡಿ ಮನೆಯ ಯಜಮಾನಿ ಖಾತೆಗಳಿಗೆ 2000 ರೂ. ಜಮೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದರು.
”ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಝರಾಕ್ಸ್ ನೀಡಬೇಕು” ತಿಳಿಸಿದರು.