ಜೂನ್ 11ರಿಂದ ಸರಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ತ್ರೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.