ತರೀಕೆರೆ ಶಾಸಕರ ಅಭಿನಂದನಾ ಸಭೆ- ಚಾಕು ಇರಿದು ಯುವಕನ ಹತ್ಯೆ- ಇಬ್ಬರಿಗೆ ಗಾಯ

ಚಿಕ್ಕಮಗಳೂರು: ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ಚಾಕು ಇರಿತದಿಂದ ವರುಣ್ (28) ಎಂಬಾತ ಸಾವಿಗೀಡಾಗಿದ್ದಾನೆ.ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ. ತರೀಕೆರೆ ಶಾಸಕ ಶ್ರೀನಿವಾಸ್ ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆಯಿತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.
ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಗೆ ಡ್ರ್ಯಾಗರ್ ಹಾಕಲಾಯಿತು.

ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತ ಉಂಟಾಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಕಬಾಬ್ ಮೂರ್ತಿ ಇರಿದಿರುವುದಾಗಿ ಆರೋಪಿಸಲಾಗಿದೆ. ಗಾಯಾಳು ವರುಣ್ ಅವರನ್ನು ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಸಾವನ್ನಪ್ಪಿದ ರು ಎಂದು ತಿಳಿದು ಬಂದಿದೆ.

ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್‌ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!